ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಮತ್ತೆ ಕೋಟ್ಯಾಧೀಶನಾಗಿದ್ದಾನೆ.
ಮಾದಪ್ಪನ ಹುಂಡಿಯಲ್ಲಿ ಕಳೆದ 25 ದಿನಗಳ ಅವಧಿಯಲ್ಲಿ 2.43 ಕೋಟಿ ರೂ ಕಾಣಿಕೆ ಹಣ ಸಂಗ್ರಹವಾಗಿದೆ.
ನಗದು ಜೊತೆಗೆ 62 ಗ್ರಾಂ ಚಿನ್ನ, 2.51 ಕೆಜಿ ಬೆಳ್ಳಿಯನ್ನು ಸಾರ್ವಜನಿಕರು ಮಹದೇಶ್ವರನಿಗೆ ಅರ್ಪಿಸಿದ್ದಾರೆ.
ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆದಿದೆ.
ಈ ಬಾರಿ ದೀಪಾವಳಿ ಹಬ್ಬ, ಅಮಾವಾಸ್ಯೆ ಹಾಗೂ ಕಾರ್ತಿಕ ಸೋಮವಾರದ ಹಿನ್ನೆಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರನ ದರ್ಶನ ಪಡೆದಿದ್ದರು.
ಈ ಹಿನ್ನೆಲೆಯಲ್ಲಿ ಹುಂಡಿ ಆದಾಯದಲ್ಲೂ ಕೂಡ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮಾದಪ್ಪನ ಆದಾಯ ಕೂಡ ಜಾಸ್ತಿಯಾಗುತ್ತಿದೆ.