ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 9 ಕೆಜಿ ಹಸಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಸತ್ಯಮಂಗಲ ಗ್ರಾಮದ ನಿವಾಸಿಗಳಾದ ಮಾದರಾಜು, ಎಂ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. ಇದೇ ಪ್ರಕರಣದ ಮತ್ತೋರ್ವ ಆರೋಪಿ ಮೂರ್ತಿ ಪರಾರಿಯಾಗಿದ್ದು ಈತನ ಪತ್ತೆಗೆ ಈಗಾಗಲೇ ಬಲೆ ಬೀಸಲಾಗಿದೆ.
ಘಟನೆ ವಿವರ: ಪಿ ಜಿ ಪಾಳ್ಯ ವನ್ಯಜೀವಿ ವಲಯದ ಪಿಜಿ ಪಾಳ್ಯ ಶಾಖೆಯ ಲೊಕ್ಕನಹಳ್ಳಿ ಗಸ್ತಿಗೆ ಒಳಪಡುವ ದೊಡ್ಡಕೋಬೆ ಹಳ್ಳ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳು ಗಸ್ಸು ಮಾಡುತ್ತಿದ್ದ ಸಂದರ್ಭದಲ್ಲಿ ಮೂವರು ಆರೋಪಿಗಳು ಶುಕ್ರವಾರ ಸಂಜೆ 6:30ರಲ್ಲಿ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಬೈಕ್‌ನಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿರುವ ಮಾಹಿತಿ ತಿಳಿದ ತಕ್ಷಣ ಮಲೆ ಮಹದೇಶ್ವರ ಉಪ ಸಂರಕ್ಷಣಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಎಸಿಎಫ್ ಶಿವರಾಂ. ಕೆ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಭರತ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಸಾಗಣೆ ಮಾಡುತ್ತಿದ್ದ ಒಂಬತ್ತು ಕೆಜಿ ಹಸಿ ಶ್ರೀಗಂಧದ ಮರದ ತುಂಡುಗಳು ಹಾಗೂ ದ್ವಿಚಕ್ರ ವಾಹನವನ್ನು, ಇತರೆ ಪರಿಕರಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ದಾಳಿಯಲ್ಲಿ ಉಪವಲಯ ಅರಣ್ಯಾಧಿಕಾರಿ ಕೃಷ್ಣಪ್ಪ ನಾಯ್ಕ, ಗಸ್ತು ಅರಣ್ಯ ಪಾಲಕರಾದ ವಿಠ್ಠಲ್ ಬೀರಪ್ಪ ಶಿಗ್ಗಾಂವಿ, ಯಮನಪ್ಪ ಬಾಳಪ್ಪ ಮೆಳವಂಕಿ, ಆರ್ ರಂಗಸ್ವಾಮಿ ಪಾಲ್ಗೊಂಡಿದ್ದರು.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…