ಚಾಮರಾಜನಗರ: ತಾಲೂಕಿನ ಅಯ್ಯನಪುರ ಗ್ರಾಮದ ಬಳಿ ಜಮೀನಿಗೆ ಹೋಗುತ್ತಿದ್ದ ರೈತರಿಬ್ಬರು ಮಾರ್ಗ ರಸ್ತೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬುಧವಾರ ( ಅಕ್ಟೋಬರ್ 23 ) ಸಂಜೆ ನಡೆದಿದೆ.
ತಾಲ್ಲೂಕಿನ ಅಯ್ಯನಪುರ ಗ್ರಾಮದ ನಿವಾಸಿ ನಾಗೇಂದ್ರ( 45 ) ಮಲ್ಲೇಶ (48) ಮೃತ ದುರ್ದೈವಿಗಳು. ಈ ಇಬ್ಬರು ರೈತರು ತಮ್ಮ ಜಮೀನಿಗೆ ತೆರಳು ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿರುವ ತಂತಿ ಬೈಕ್ ಸವಾರನ ಕುತ್ತಿಗೆಗೆ ಸಿಲುಕಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸೆಸ್ಕಾಂ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನಿಡಿ ಮಹಜರು ಮಾಡಿದ್ದಾರೆ. ಕುಟುಂಬಸ್ಥರ ರೋಧನೆ ಹೇಳತೀರದ್ದಾಗಿದೆ. ರೈತ ಮುಖಂಡರು ಹಾಗೂ ಗ್ರಾಮಸ್ಥರು ಸೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಗದಗ: ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ…
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್…
ಮೈಸೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು…
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ…
ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ.…