Mysore
18
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

ಹನೂರು ಪಟ್ಟಣದ 13 ವಾರ್ಡ್‌ಗಳಲ್ಲಿ 20ಕ್ಕೂ ಹೆಚ್ಚು ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

ಹನೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ಮೂರ್ತಿಗಳಿಗೆ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದರು.

ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡಗಳಲ್ಲಿ 20ಕ್ಕೂ ಹೆಚ್ಚು ಗೌರಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಕ್ಷೇತ್ರ ವ್ಯಾಪ್ತಿಯಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದ ಸ್ಥಳಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬವನ್ನು ನಾಡಿನ ಸಂಸ್ಕೃತಿ, ಭಾವೈಕ್ಯತೆಯ ಪ್ರತೀಕವಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಕೆಲವು ಗ್ರಾಮಗಳಿಗೆ ನಾನೇ ಖುದ್ದು ಭೇಟಿ ನೀಡಿ ಗ್ರಾಮಸ್ಥರಿಗೆ ಶುಭ ಕೋರಿದ್ದೇನೆ. ಇನ್ನು ಕೆಲವು ಗ್ರಾಮಗಳಿಗೆ ಸಮಯದ ಅಭಾವದಿಂದ ಹೋಗಲು ಸಾಧ್ಯವಾಗಿಲ್ಲ. ಈ ವರ್ಷ ವಿಘ್ನ ವಿನಾಯಕ ಎಲ್ಲಾ ವಿಘ್ನಗಳನ್ನು ಬಗೆಹರಿಸಿ ರಾಜ್ಯಾದ್ಯಂತ ಉತ್ತಮ ಮಳೆ, ಬೆಳೆಯಾಗಿ ರೈತರು ಆರ್ಥಿಕವಾಗಿ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಪ್ರಶಾಂತ್ ಕುಮಾರ್, ವಿಜಯ್ ಕುಮಾರ್, ಶ್ರೀರಂಗಂ, ಯರಂಬಡಿ ಹುಚ್ಚಯ್ಯ, ರಾಜೇಂದ್ರ, ಮಹದೇವ್, ತಂಗವೇಲು, ಮುರುಗೇಶ್, ರಾಮು, ಅರುಣ್ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!