ಚಾಮರಾಜನಗರ : ಚಿಕನ್ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.