ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗಿದ್ದು, ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್ ಮದ್ಯ ಸಿಕ್ಕಿದೆ.
ಮದ್ಯ ಹಾಗೂ ತಂಬಾಕು ಮುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಲ್ಲೇ ವಾಸಿಸುವ ಕೆಲ ಕಿಡಿಗೇಡಿಗಳು ದೇವಸ್ಥಾನದ ಪಾವಿತ್ರ್ಯಕ್ಕೆ ತೊಡಕಾಗಿದ್ದಾರೆ.
ಅಕ್ರಮವಾಗಿ ಮದ್ಯ ತಂದು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 300 ಲೀಟರ್ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಬಂಧಿತ ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕಠಿಣ ಶಿಕ್ಷೆ ನೀಡುವಂತೆ ಆಗ್ರಹ ಕೇಳಿಬರುತ್ತಿದೆ.





