ಚಾಮರಾಜನಗರ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಜನ ಸಾವು : ಸರ್ಕಾರಿ ನೌಕರಿ ನೀಡುವಂತೆ ಮೃತ ಕುಟುಂಬಸ್ಥರ ಮನವಿ

ಚಾಮರಾಜನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಿಲ್ಲ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಲಿಲ್ಲವೆಂದು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇದಕ್ಕೆ ಎಸ್​ಡಿಪಿಐ ಕೂಡ ಬೆಂಬಲ ಸೂಚಿಸಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಹೀಗಾಗಿ ಸದ್ಯ ಪರಿಹಾರ ಹಣಕ್ಕಿಂತ ನೌಕರಿ ಕೊಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಆಕ್ಸಿಜನ್ ಕೊರತೆಯಿಂದ 36 ಜನ ಸಾವು : ಮೇ 2ರಂದು 2021ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿಂದ ಆಕ್ಸಿಜನ್ ಬರಲೇ ಇಲ್ಲ, ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್‌, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.

ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್‌ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್‌ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ ಹಾಗೂ ಆಗಸ್ಟ್‌ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.

lokesh

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

3 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

4 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

5 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

5 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

5 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 hours ago