ಚಾಮರಾಜನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಿಲ್ಲ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಲಿಲ್ಲವೆಂದು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇದಕ್ಕೆ ಎಸ್ಡಿಪಿಐ ಕೂಡ ಬೆಂಬಲ ಸೂಚಿಸಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಹೀಗಾಗಿ ಸದ್ಯ ಪರಿಹಾರ ಹಣಕ್ಕಿಂತ ನೌಕರಿ ಕೊಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಆಕ್ಸಿಜನ್ ಕೊರತೆಯಿಂದ 36 ಜನ ಸಾವು : ಮೇ 2ರಂದು 2021ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿಂದ ಆಕ್ಸಿಜನ್ ಬರಲೇ ಇಲ್ಲ, ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.
ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್‌ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ ಹಾಗೂ ಆಗಸ್ಟ್ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…