Mysore
22
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರಿಸಿ ಎಂದು ರಾಜ್ಯದ ಸಂಸದರಿಗೆ ಕರೆ ಕೊಟ್ಟರು.

ಸರ್ವ ಜಾತಿ ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್‌ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಸಿಎಂ ಆಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಅವರು, ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಎಂಭತ್ತು ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್‌ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು.

 

Tags: