ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರಿಸಿ ಎಂದು ರಾಜ್ಯದ ಸಂಸದರಿಗೆ ಕರೆ ಕೊಟ್ಟರು.
ಸರ್ವ ಜಾತಿ ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಸಿಎಂ ಆಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದುವರಿದು ಮಾತನಾಡಿದ ಅವರು, ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಎಂಭತ್ತು ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…