ಚಾಮರಾಜನಗರ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮದಲ್ಲಿ ಫ್ಲೋರೈಡ್ ಮಿಶ್ರಿತ ನೀರು ಪೂರೈಕೆಯಾಗಿದ್ದು, ನೀರನ್ನು ಸೇವಿಸಿದ 47 ಜನರ ಕಿಡ್ನಿ ವೈಫಲ್ಯವಾಗಿದೆ.
ಅಲ್ಲದೇ ಗ್ರಾಮದ ಹಲವು ಜನರು ವಿವಿಧ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮದಲ್ಲಿ ಅಂತರ್ಜಲ ನೀರಿನ ಮಟ್ಟ ಕಡಿಮೆಯಾಗಿದ್ದು, ನೀರಿನಲ್ಲಿ ಫ್ಲೋರೈಡ್ ಪ್ರಮಾಣ ಹೆಚ್ಚಾಗಿದೆ. ಇದರಿಂದಾಗಿ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ. 47 ಜನರು ಕಿಡ್ನಿ ಕಳೆದುಕೊಂಡಿದ್ದು, ಹಲವರು ಹೈಪರ್ ಟೆನ್ಶನ್, ಥೈರಾಯ್ಡ್, ಸಂದಿವಾತ ಸೇರಿದಂತೆ ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…