Mysore
32
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಮಾಜಿ ಶಾಸಕ ಆರ್.‌ನರೇಂದ್ರ ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್ ನಲ್ಲಿ ಅನುಮೋದನೆ ನೀಡಿರುವುದರಿಂದ ಶಾಶ್ವತ ನೀರಿನ ಸಮಸ್ಯೆ ಬಗೆಹರಿಯಲಿದೆ. ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಒತ್ತು ನೀಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ವೆಂಕಟೇಶ್, ಹೆಚ್ ಸಿ ಮಹದೇವಪ್ಪ, ಸಂಸದ ಸುನಿಲ್ ಬೋಸ್ ರವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.

ಹನೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನೂರು ತಾಲೂಕಿನ ರಾಮಪುರ ಹೋಬಳಿ ವ್ಯಾಪ್ತಿಯ ಪ್ರಮುಖ ಜಲಾಶಯಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಹಲವಾರು ವರ್ಷಗಳಿಂದ ಶ್ರಮವಹಿಸಿ ಡಿಪಿಆರ್ ಕೂಡ ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಲಾಗಿತ್ತು. ಕಳೆದ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರಿಂದ ನಮಗೆ ಅನುದಾನ ನೀಡಲಿಲ್ಲ, ಈ ಬಾರಿ ಹನೂರು ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ 490 ಕೋಟಿ ವೆಚ್ಚದ ಯೋಜನೆ ಘೋಷಣೆಯಾಗಿರುವುದರಿಂದ ಶಾಶ್ವತವಾಗಿ ನೀರಿನ ಸಮಸ್ಯೆ ಬಗೆಯರಿಯಲಿದೆ. ಒಟ್ಟಾರೆ ಸುಮಾರು 12 ಸಾವಿರ ಎಕರೆ ಪ್ರದೇಶದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕೊಳ್ಳೇಗಾಲ ಪಟ್ಟಣದಿಂದ ಹನೂರು ಪಟ್ಟಣದವರೆಗೆ ಕೆಶಿಪ್ ಯೋಜನೆಯಡಿ ಮೊದಲ ಹಂತದಲ್ಲಿ ರಸ್ತೆ ಅಭಿವೃದ್ಧಿಪಡಿಸಲು 108 ಕೋಟಿ ಅನುದಾನ ನೀಡಿ ಕಾಮಗಾರಿ ಪ್ರಾರಂಭ ಮಾಡಲಾಗಿತ್ತು. ಇದೀಗ ಕಾಮಗಾರಿ ಅಂತಿಮ ಹಂತದಲ್ಲಿದೆ. ಕಳೆದ ಬಾರಿಯೇ ಹನೂರು ಪಟ್ಟಣದಿಂದ ರಾಮಾಪುರ ಮಾರ್ಗವಾಗಿ ಪಾಲರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಕೆಶಿಪ್ ಯೋಜನೆಗೂ ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿತ್ತು. ಆದರೆ ಹಣ ಬಿಡುಗಡೆಯಾಗಿರಲಿಲ್ಲ ಇದೀಗ ರಸ್ತೆ ಕಾಮಗಾರಿ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಕೆ ಶಿಪ್ ಎರಡನೇ ಹಂತದ ಕಾಮಗಾರಿಯ ಪೂರ್ಣಗೊಂಡು ಕ್ಷೇತ್ರದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಒಟ್ಟಾರೆ ಹಲವು ವರ್ಷಗಳ ಬೇಡಿಕೆ ಇದೀಗ ನೆರವೇರಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಹಾಗೂ ವ್ಯವಸಾಯಕ್ಕೆ ನೀರಾವರಿ ವ್ಯವಸ್ಥೆಗೆ ಹೆಚ್ಚಿನ ಅನುಕೂಲವಾಗಲಿದೆ. ಎರಡನೇ ಹಂತದ ಕೆಶಿಪ್ ಕಾಮಗಾರಿ ಪ್ರಾರಂಭಗೊಂಡು ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿದರೆ ಪ್ರವಾಸೋದ್ಯಮಕ್ಕೂ ಹೆಚ್ಚಿನ ಅನುಕೂಲವಾಗಲಿದೆ. ಒಟ್ಟಾರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

 

Tags:
error: Content is protected !!