ಚಾಮರಾಜನಗರ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಹಾಗೂ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
ಈ ಹಿನ್ನಲೆಯಲ್ಲಿ 2024-25ನೇ ಸಾಲಿನವರೆಗೆ ಬಾಕಿ ಉಳಿಸಿಕೊಂಡಿರುವ ಚಾಮರಾಜನಗರ ನಗರಸಭಾ ವ್ಯಾಪ್ತಿಗೆ ಒಳಪಡುವ ಕಟ್ಟಡ, ನಿವೇಶನಗಳ ಮಾಲೀಕರು ಬಾಕಿ ಇರುವ ಆಸ್ತಿ ತೆರಿಗೆಯನ್ನು ಸೆಪ್ಟೆಂಬರ್ 14 ರೊಳಗಾಗಿ ಪಾವತಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.