ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರಿಂದು ಮಾಧ್ಯಮದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಜೊತೆ ಗುಪ್ತ ಸಭೆ ನಡೆಸಿದರು.
5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಡಿಸಿಎಫ್, ಎಸಿಎಫ್, ಆರ್‌ಎಫ್ಒರನ್ನು ಕಡ್ಡಾಯ ರಜೆ ಮೇಲೆ ಕಳಿಸಿ ಆದೇಶ ಹೊರಡಿಸಲಾಗಿದೆ.
ಹುಲಿಗಳ ಹತ್ಯೆಯ ಬಳಿಕ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟಿರುವ ಉಸ್ತುವಾರಿ ಸಚಿವ ವೆಂಕಟೇಶ್ ಅವರು, ಮಾಧ್ಯದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಬಳಿ ಮಾಹಿತಿ ಪಡೆಯುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಸಕ ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾನಾಗ್, ಸಿಸಿಎಫ್ ಹಿರಾಲಾಲ್, ಡಿಸಿಎಫ್ ಸಂತೋಷ್ ಕುಮಾರ್ ಸೇರಿದಂತೆ ಇತರರು ಭಾಗಿಯಾಗಿದ್ದಾರೆ.





