ಚಾಮರಾಜನಗರ

5 ಹುಲಿಗಳ ಹತ್ಯೆ ಪ್ರಕರಣ: ಅರಣ್ಯಾಧಿಕಾರಿಗಳ ಜೊತೆ ಸಚಿವ ವೆಂಕಟೇಶ್‌ ಗುಪ್ತ ಸಭೆ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌ ಅವರಿಂದು ಮಾಧ್ಯಮದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಜೊತೆ ಗುಪ್ತ ಸಭೆ ನಡೆಸಿದರು.

5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಡಿಸಿಎಫ್, ಎಸಿಎಫ್, ಆರ್‌ಎಫ್ಒರನ್ನು ಕಡ್ಡಾಯ ರಜೆ ಮೇಲೆ ಕಳಿಸಿ ಆದೇಶ ಹೊರಡಿಸಲಾಗಿದೆ.

ಹುಲಿಗಳ ಹತ್ಯೆಯ ಬಳಿಕ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟಿರುವ ಉಸ್ತುವಾರಿ ಸಚಿವ ವೆಂಕಟೇಶ್ ಅವರು, ಮಾಧ್ಯದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಬಳಿ ಮಾಹಿತಿ ಪಡೆಯುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಸಕ ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾನಾಗ್, ಸಿಸಿಎಫ್ ಹಿರಾಲಾಲ್, ಡಿಸಿಎಫ್ ಸಂತೋಷ್ ಕುಮಾರ್ ಸೇರಿದಂತೆ ಇತರರು ಭಾಗಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

5 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

5 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

11 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

11 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

11 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

12 hours ago