ಚಾಮರಾಜನಗರ: 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ.
ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಗಳಿಗೆ ನೆರವು ನೀಡಿದ ಕೂನಪ್ಪ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಮಾದ ಅಲಿಯಾಸ್ ಮಾದರಾಜು, ನಾಗರಾಜು ಹಾಗೂ ಕೂನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.





