ಚಾಮರಾಜನಗರ

5 ಹುಲಿಗಳ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು ದಿನಗಳ ಕಾಲ ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದಾರೆ.

ಚಾಮರಾಜನಗರ ಜಿಲ್ಲಾ ಕೊಳ್ಳೇಗಾಲ ಜೆಎಂಎಫ್‌ ಕೋರ್ಟ್‌ ಆರೋಪಿಗಳನ್ನು ಮೂರು ದಿನಗಳ ಕಾಲ ಅರಣ್ಯ ಇಲಾಖೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ತನಿಖೆ ವೇಳೆ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ವಿಷಪ್ರಾಶನದಿಂದ ಸಾವನ್ನಪ್ಪಿದ್ದವು. ಪ್ರೀತಿಯಿಂದ ಸಾಕಿದ್ದ ಹಸುವನ್ನು ಹುಲಿ ಕೊಂದು ಹಾಕಿತ್ತು. ಇದರಿಂದ ಬೇಸತ್ತಿದ್ದ ಮಾದುರಾಜು ಹಾಗೂ ನಾಗರಾಜು ಸತ್ತ ಹಸುವಿಗೆ ವಿಷವಿಟ್ಟಿದ್ದರು. ಹಸುವನ್ನು ತಿಂದಿದ್ದ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

3 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

3 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

9 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

9 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

9 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

10 hours ago