ಚಾಮರಾಜನಗರ

5 ಗ್ರಾಮ ಸೌರ ಸ್ಪರ್ಧೆಗೆ ಆಯ್ಕೆ : ಅಂತಿಮ ಆಯ್ಕೆ ಗ್ರಾಮಕ್ಕೆ 1 ಕೋಟಿ ರೂ!

ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ.

ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಗುರುತಿಲಾಗಿದೆ. ಅಂತಿಮವಾಗಿ, ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ೧ ಕೋಟಿ ರೂ. ಪ್ರೋತ್ಸಾಹ ಧನ ಲಭಿಸಲಿದ್ದು ಮೈಸೂರಿನ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮಿತಿ (ಡಿಎಲ್‌ಸಿ) ಸಭೆಯಲ್ಲಿ ಈ ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ.

ನವೀಕರಿಸಬಹುದಾದ ಇಂಧನ ಬಳಕೆಯ ಉತ್ತೇಜನ, ಮನೆಗಳಿಗೆ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಅಡಿಯಲ್ಲಿ ಮೇಲ್ಚಾವಣಿ ಸೌರಶಕ್ತಿ ಅಳವಡಿಕೆ ,ಇತರ ಗ್ರಾಹಕರಿಗೆ ಸಬ್ಸಿಡಿ ರಹಿತ ಯೋಜನೆಯಡಿಯಲ್ಲಿ ಚಾವಣಿ ಸೌರಶಕ್ತಿ ಅಳವಡಿಕೆಗೆ ಪ್ರೋತ್ಸಾಹ, ನೀರಾವರಿ ಪಂಪ್‌ಸೆಟ್‌ಗಳಿಗೆ ಪಿಎಂ-ಕುಸುಮ್ ಯೋಜನೆ ಅಡಿಯಲ್ಲಿ ಅನುಷ್ಠಾನ, ಸರ್ಕಾರಿ ಕಟ್ಟಡಗಳ ಮೇಲೆ ಸೌರಶಕ್ತಿ ಅಳವಡಿಕೆ, ಕುಡಿಯುವ ನೀರು ಮತ್ತು ಬೀದಿ ದೀಪಗಳಿಗೆ ಸೌರಶಕ್ತಿ ಬಳಕೆಗೆ ಸಂಬಂಽಸಿದಂತೆ ಈ ಐದು ಗ್ರಾಮಪಂಚಾಯಿತಿ ಮಟ್ಟದಲ್ಲಿ ಸ್ಪರ್ಧೆ ನಡೆಯಲಿದೆ.

ಈ ಸ್ಪರ್ಧೆಯು ಪ್ರಸಕ್ತ ವರ್ಷದ ಡಿ. ೩೧ರವರೆಗೆ ನಡೆಯಲಿದ್ದು ಸ್ಪರ್ಧೆಯ ಅಂತ್ಯದಲ್ಲಿ ಮೌಲ್ಯಮಾಪನದ ಆಧಾರದ ಮೇಲೆ ಗರಿಷ್ಠ ನವೀಕರಿಸಬಹುದಾದ ಇಂಧನ ಬಳಸಿದ ಗ್ರಾಮವನ್ನು ಮಾದರಿ ಸೌರ ಗ್ರಾಮವೆಂದು ಘೋಷಿಸಲಾಗುತ್ತದೆ. ಆಯ್ಕೆಯಾದ ಗ್ರಾಮಕ್ಕೆ ನವೀಕರಿಸಬಹುದಾದ ಇಂಧನ ಸಚಿವಾಲಯದ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಜಿಲ್ಲಾಽಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

9 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

10 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

10 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

12 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

12 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

12 hours ago