ಚಾಮರಾಜನಗರ

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಜರುಗಿದೆ.

ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದ ಪರಶಿವಮೂರ್ತಿ ಆರ್ ಎಂಬುವರಿಗೆ ಸೇರಿದ ಆರು ಹಸುಗಳು ಮೇಲ್ನೋಟಕ್ಕೆ ವಿಷ ಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ವಿವರ: ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದ ನಿವಾಸಿ ಪರಶಿವಮೂರ್ತಿ ಎಂಬುವವರು ತಮ್ಮ ಜಮೀನಿನಲ್ಲಿ ಆರು ಹಸುಗಳನ್ನು ಮೇವು ಮೇಯಲು ಬಿಟ್ಟಿದ್ದರು. ಆದರೆ ಏಕಾಏಕಿ ಆರು ಹಸುಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.

ಹಸುಗಳ ಮಾಲೀಕ ಪರಶಿವಮೂರ್ತಿ ಮಾತನಾಡಿ, ನಮ್ಮ ಜಮೀನಿನಲ್ಲಿ ಆರು ಹಸುಗಳನ್ನು ಮೇವು ಮೇಯಲು ಬಿಟ್ಟಿದ್ದೆವು. ಆದರೆ ಏಕಾಏಕಿ ಹಸುಗಳು ಮೃತಪಟ್ಟಿವೆ. ಮೇಲ್ನೋಟಕ್ಕೆ ಯಾರೋ ಕಿಡಿಗೇಡಿಗಳು ವಿಷ ಹಾಕಿ ಕೊಂದಿದ್ದಾರೆ. ಹಸುಗಳ ಬಾಯಲ್ಲಿ ನೊರೆ ತುಂಬಿಕೊಂಡು ಹೊಟ್ಟೆ ಊದಿ ಕೊಂಡಿದೆ. ತಪ್ಪಿತಸ್ಥ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಪರಿಹಾರ ಕೊಡುವಂತೆ ಮನವಿ ಮಾಡಿದ್ದಾರೆ.

ಶಾಸಕರಿಂದ ಸ್ಪಂದನೆ: ಶೆಟ್ಟಳ್ಳಿ ಗ್ರಾಮದ ಪರಶಿವಮೂರ್ತಿ ಎಂಬುವವರಿಗೆ ಸೇರಿದ ಆರು ಹಸುಗಳು ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಂ ಆರ್ ಮಂಜುನಾಥ್ ಪಶು ವೈದ್ಯಾಧಿಕಾರಿ ಡಾ. ಸಿದ್ದರಾಜುರವರಿಗೆ ದೂರವಾಣಿ ಕರೆ ಮುಖಾಂತರ ಮಾತನಾಡಿ ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಸೂಕ್ತ ವರದಿ ನೀಡಬೇಕು. ಒಟ್ಟಾರೆ ಹಸುಗಳ ಸಾವಿಗೆ ಕಾರಣವಾಗಿರುವುದನ್ನು ಪತ್ತೆ ಹಚ್ಚಬೇಕು ಎಂದು ಸೂಚನೆ ನೀಡಿದ್ದಾರೆ. ಇದಲ್ಲದೆ ರೈತನಿಗೆ ಧೈರ್ಯ ತುಂಬಿ ಕ್ಷಣಾರ್ಧದಲ್ಲಿಯೇ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

3 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

4 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

5 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

8 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

9 hours ago