ಗುಂಡ್ಲುಪೇಟೆ: ಲೋ ಬಿಪಿಯಿಂದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ನಡೆದಿದೆ.
ಮಹೇಶ್ ಹಾಗೂ ಸುಮಾ ದಂಪತಿಯ ಪುತ್ರ ಆರ್ಯ ಎಂಬಾತನೇ ಲೋ ಬಿಪಿಯಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ಆರ್ಯ ಸೋಮವಾರ ತೀವ್ರ ಜ್ವರ ಕಾಣಿಸಿಕೊಂಡಿತ್ತು.
ಈ ವೇಳೆ ಪೋಷಕರು ಆರ್ಯನನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದರು. ಪರೀಕ್ಷಿಸಿದ ವೈದ್ಯರು ಬಿಪಿ ತುಂಬಾ ಕಡಿಮೆಯಾಗಿದೆ. ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಸೂಚನೆ ನೀಡಿದ್ದಾರೆ.
ಕೂಡಲೇ ಪೋಷಕರು ಆರ್ಯನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಆರ್ಯ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಆರ್ಯನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.





