Mysore
28
few clouds

Social Media

ಶುಕ್ರವಾರ, 30 ಜನವರಿ 2026
Light
Dark

ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶ

72.25 quintals of Annabhagya rice being transported illegally seized

ಚಾಮರಾಜನಗರ: ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಎರಡು ವಾಹನಗಳನ್ನು ಸೀಜ್ ಮಾಡಿರುವ ಪೊಲೀಸರು, ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!