ಚಾಮರಾಜನಗರ

ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶ

ಚಾಮರಾಜನಗರ: ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಎರಡು ವಾಹನಗಳನ್ನು ಸೀಜ್ ಮಾಡಿರುವ ಪೊಲೀಸರು, ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಪಿಎನ್‌ಜಿ ಗ್ರಾಹಕರ ಎಲ್‌ಪಿಜಿ ಸಿಲಿಂಡರ್ ಮೇಲೆ ‘ಕೇಂದ್ರ’ ಕಣ್ಣು?

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…

16 seconds ago

ಮೈಸೂರು ಜನತೆಗೆ ನೀರಿನ ಕರ ಏರಿಕೆಯ ಬರೆ

ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…

4 mins ago

ಇಂದಿನಿಂದ ಸ್ವಯಂ ಗಣತಿ

ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ  ಬೆಂಗಳೂರು: ರಾಷ್ಟ್ರೀಯ ಜನಗಣತಿ…

12 mins ago

ನೀರಿನ ಶುಲ್ಕ ಶೇ.25 ಹೆಚ್ಚಳ

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…

17 mins ago

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

10 hours ago