ಚಾಮರಾಜನಗರ

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ ವಾಹನ ಸೇರಿದಂತೆ ಒಟ್ಟು 8 ಕಳ್ಳಬೇಟೆ ತಡೆ ಶಿಬಿರಗಳ ಮೇಲೆ ದಾಳಿ ನಡೆಸಿ ಪೀಠೋಪಕರಣ ಹಾಗೂ ದಾಖಲೆಗಳನ್ನು ಜಖಂಗೊಳಿಸಿದ್ದಾರೆ. ಈ ಸಂಬಂಧ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ದೂರು ನೀಡಲಾಗಿದ್ದು, ಎಫ್‌ಐಆರ್ ದಾಖಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಮಾಹಿತಿ ಪ್ರಕಾರ, ಆಗಸ್ಟ್ 15ರಂದು ಹನೂರು ವಲಯದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ಜಿಲ್ಲಾಧಿಕಾರಿಗಳಿಂದ ನೇಮಕಗೊಂಡ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ರವರು ನಡೆಸುತ್ತಿದ್ದಾರೆ.

ಆದರೆ ಅದೇ ವಾರದಲ್ಲಿ ದುಷ್ಕರ್ಮಿಗಳು ಸಂಖ್ಯೆ KA 10 G 0466 ಇಲಾಖಾ ವಾಹನ ಧ್ವಂಸಗೊಳಿಸಿದ್ದಾರೆ. ಕೊತ್ತನೂರು ವಲಯದ ಸುಂಡಳ್ಳಿ, ನಾಲಾಬೋಳಿ, ಮಿಂಚಿನಾರಹಳ್ಳಿ, ಹನೂರು ವಲಯದ ಹೊಳೆಮುರಿದಟ್ಟಿ, ಬೇಟೇಗಾರನ ಗುಡ್ಡ, ಬೂದಿಕೆರೆ, ಕಳ್ಳಿದೊಡ್ಡಿ ಹಾಗೂ ಮಲೆ ಮಹದೇಶ್ವರ ವಿಭಾಗದ ಸೆಲ್ಲಿಪುರ ಸೇರಿ 8 ಕಳ್ಳಬೇಟೆ ತಡೆ ಶಿಬಿರಗಳನ್ನು ನಾಶಪಡಿಸಿದ್ದಾರೆ.

ಇದಲ್ಲದೆ, ಆಗಸ್ಟ್ 19ರ ಮುಂಜಾನೆ 4.30ರ ಸುಮಾರಿಗೆ ಮಲೆ ಮಹದೇಶ್ವರ ವಿಭಾಗದ ಕೊಳ್ಳೇಗಾಲ ಬಫರ್ ವಲಯದ ಸತ್ತೇಗಾಲ ಜಾಗೀರಿ ಶಾಖೆಯ ಚಿಕ್ಕಮಾಕಳ್ಳಿ ಅರಣ್ಯ ಪ್ರದೇಶದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಸುಮಾರು 2.50 ಹೆಕ್ಟೇರ್ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಇದರಿಂದ ಸರ್ಕಾರಕ್ಕೆ ಅಪಾರ ನಷ್ಟ ಸಂಭವಿಸಿದೆ.

ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಎಲ್ಲಾ ಪ್ರಕರಣಗಳ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಆಧಾರದ ಮೇಲೆ FIR ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

13 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

13 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

14 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

14 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

14 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago