ಕೊಳ್ಳೇಗಾಲ ; ಪಟ್ಟಣದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿಯ ನೂತನ ಮನೆ ಅನುಗ್ರಹದಲ್ಲಿ ಇರಿಸಲಾಗಿದ್ದ ಆಪ್ತ ಗೆಳೆಯ ಎಸ್.ಜಯಣ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದರು.
ನಂತರ ಆಪ್ತ ಗೆಳೆಯ ಜಯಣ್ಣರಿಗೆ ಪುಷ್ಪ ಗುಚ್ಚ ವಿರಿಸಿ ಅಂತಿಮ ನಮನ ಸಲ್ಲಿಸಿದರು.
ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸರಿಂದ 3 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು.
ಸಚಿವರಾದ ಎಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಸಿ.ಪುಟ್ಟರಂಗಶೆಟ್ಟಿ, ಎಂ.ಆರ್. ಮಂಜುನಾಥ್, ಅನಿಲ್ ಚಿಕ್ಕಮಾಧು, ವಿಧಾನ ಪರಿಷತ್ ಸದಸ್ಯ ಡಿ.ತಿಮ್ಮಯ್ಯ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಇತರರು ಪಾಲ್ಗೊಂಡಿದ್ದರು.