Mysore
20
clear sky

Social Media

ಭಾನುವಾರ, 08 ಮಾರ್ಚ್ 2026
Light
Dark

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು ಗದ್ದೆಯಲ್ಲಿ ಸಿಲುಕಿ ನರಳಾಡಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸತ್ಯಮಂಗಲ ಅರಣ್ಯ ಪ್ರದೇಶದ ನಡೆದಿದೆ.

ಕಳೆದ ಎರಡು ವರ್ಷಗಳಿಂದ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ ಜಲಾಶಯ, ಕರೆಕಟ್ಟೆಗಳು ಭರ್ತಿಯಾಗದೆ ಸಾರ್ವಜನಿಕರು ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಿದೆ.

ಕಳೆದ ಒಂದು ವಾರದ ಹಿಂದೆ ಒಂದು ದಿನ ಮಳೆಯಾದ ಪರಿಣಾಮ ಅಲ್ಲಲ್ಲಿ ಕೆರೆ ಕಟ್ಟೆಗಳಲ್ಲಿ ನೀರು ಸಂಗ್ರಹವಾಗಿತ್ತು. ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸಾರಂಗವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಮನವಿ: ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ವ್ಯಾಪ್ತಿಲ್ಲಿರುವ ಕೆರೆಕಟ್ಟೆಗಳಿಗೆ ನೀರು ತುಂಬಿಸಿ ವನ್ಯ ಪ್ರಾಣಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.

 

Tags:
error: Content is protected !!