ಚಾಮರಾಜನಗರ

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಂಜೆ ಕೊನೆಯುಸಿರೆಳೆದಿದೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಅಜ್ಜೀಪುರ ಸಮೀಪದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ ಸಂಜೆ 4 ಕಾಡಾನೆಗಳು ನೀರು ಕುಡಿಯಲು ಎಂದಿನಂತೆ ಬಂದಿದ್ದವು. ಈ ಪೈಕಿ 3 ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡಿದ್ದವು.

ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಡುತೊರೆ ಹಳ್ಳ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದೊಂದಿಗೆ ಮೂರು ಆನೆಗಳನ್ನು ರಕ್ಷಣೆ ಮಾಡಲಾಗಿತ್ತು. ಎರಡು ಆನೆಗಳು ಚೇತರಿಸಿಕೊಂಡು ಕಾಡಿನತ್ತ ತೆರಳಿದ್ದವು.

ಇನ್ನೊಂದು ಹೆಣ್ಣಾನೆ ನಿತ್ರಾಣಗೊಂಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶುವೈದ್ಯಾಧಿಕಾರಿ ಡಾ. ರಮೇಶ್ ರವರು ನಿರಂತರವಾಗಿ ಚಿಕಿತ್ಸೆ ಕೊಡುತ್ತಿದ್ದರು. ಜೊತೆಗೆ ಸಾಕಾನೆ ಮಹೇಂದ್ರನನ್ನು ಬಿಟ್ಟು ಅಸ್ವಸ್ಥಗೊಂಡಿರುವ ಆನೆಯನ್ನು ಮೇಲೆಳಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ನಿಲ್ಲದ ಪ್ರಯತ್ನ ಮಾಡಿದರು. ಆನೆಗೆ ಇಷ್ಟವಾದ ಕಬ್ಬು ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರ ಮೇವುಗಳನ್ನು ಸ್ಥಳದಲ್ಲಿ ಇಡಲಾಗಿದ್ದರೂ ಆನೆ ಮಾತ್ರ ಮೇಲೆಳದೇ ಮೃತಪಟ್ಟಿದೆ.

ನಿರಂತರ ಚಿಕಿತ್ಸೆ: ಕಳೆದ ಮೂರು ದಿನಗಳಿಂದಲೂ ಸಹ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶು ವೈದ್ಯಾಧಿಕಾರಿ ಡಾ. ರಮೇಶ್ ನೇತೃತ್ವದಲ್ಲಿ ನಿತ್ರಾಣಗೊಂಡಿದ್ದ ಕಾಡಾನೆಗೆ ಸಾಕಷ್ಟು ಔಷಧೋಪಚಾರಗಳು ನಡೆಯುತ್ತಿತ್ತು. ಮೂರು ದಿನಗಳಿಂದ ನಿರಂತರವಾಗಿ ಚಿಕಿತ್ಸೆಯನ್ನ ನೀಡಲಾಗುತ್ತಿತ್ತು. ಸ್ಥಳದಲ್ಲಿಯೇ ಆನೆಗೆ ಬೇಕಾದಂತಹ ಪೌಷ್ಟಿಕ ಆಹಾರ ಸಹಿತವಾಗಿ ವೈದ್ಯಾಧಿಕಾರಿಗಳು ಕೂಡ ಅಲ್ಲೇ ಮೊಕ್ಕಂ ಹೂಡಿದ್ದರು. ಆದರೆ ಕೊನೆಗೂ ಚಿಕಿತ್ಸೆ ಫಲಿಸದೆ ಆನೆ ಕೊನೆಯುಸಿರಳೆದಿದೆ.

ಆಂದೋಲನ ಡೆಸ್ಕ್

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago