ಚಾಮರಾಜನಗರ

ಚಾಮರಾಜನಗರದಲ್ಲಿ ವಿಜೃಂಭಣೆಯ ಕನ್ನಡ ರಾಜ್ಯೋತ್ಸವ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ವೆಂಕಟೇಶ್‌ ಅವರು ಪೊಲೀಸರ ತುಕಡಿ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ಪೊಲೀಸರು ಹಾಗೂ ವಿದ್ಯಾರ್ಥಿಗಳ ಪಥಸಂಚಲನ ನಡೆಯಿತು.

ಇದನ್ನು ಓದಿ; 70ನೇ ಕನ್ನಡ ರಾಜ್ಯೋತ್ಸವ: ಮೈಸೂರಿನ ಓವಲ್ ಮೈದಾನದಲ್ಲಿ ಧ್ವಜಾರೋಹಣ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವೆಂಕಟೇಶ್‌ ಅವರು, ರಾಷ್ಟ್ರಕವಿ ಕುವೆಂಪು ಅವರ ನುಡಿಗಳಂತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬಂತೆ ಕನ್ನಡ ನಾಡಿನಲ್ಲ ಹುಟ್ಟಿರುವ ನಾವೆಲ್ಲರೂ ಎಲ್ಲೇ ನೆಲೆಸಿದರೂ ನಾಡು-ನುಡಿಯ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್‌ ಸಿಇಓ ಮೋನಾರೋತ್‌, ಎಸ್ಪಿ ಡಾ.ಕವಿತಾ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago