ಚಾಮರಾಜನಗರ

ಬೋನಿನಲ್ಲಿ ಸೆರೆಯಾದ ಚಿರತೆ

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್‌ ಜೋನ್‌ ವ್ಯಾಪ್ತಿಯ ಪಾರ್ವತಿ ಬೆಟ್ಟದ ಕಂದೇಗಾಲದ ಒಂಟಿಗುಡ್ಡದಲ್ಲಿ ಸುಮಾರು ಎರಡು ವರ್ಷದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ತಾಲೂಕಿನ ಕಂದೇಗಾಲ ಗ್ರಾಮದ ಪ್ರಕಾಶ್‌ ಎಂಬ ರೈತನ ಜಮೀನಿನಲ್ಲಿ ಅರಣ್ಯ ಇಲಾಖೆ ಬೋನು ಇರಿಸಿತ್ತು. ಇಂದು ಬೆಳಗಿನ ಜಾವ ಎರಡು ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ಬೆಳಗಿನ ಜಾವ ರೈತರು ಹೊಲದ ಕಡೆಗೆ ತೆರಳುವಾಗ ಗಮನಿಸಿ ವಿಷಯವನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಡಿಆರ್‌ಎಫ್‌ಒ ಶಿವಕುಮಾರ್‌ ನೇತೃತ್ವದ ತಂಡ ಪರಿಶೀಲನೆ ನಡೆಸಿ, ನಂತರ ಚಿರತೆಯನ್ನು ಮೂಲೆಹೊಳೆ ಅಭಯಾರಣಯದ ಮಧ್ಯೆ ಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

48 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

55 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago