ಚಾಮರಾಜಜನಗರ: ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದ ಯುವಕನೊಬ್ಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಗುರುವಾರ (ಮಾ.೨೧) ರಂದು ನಡೆದಿದೆ.
ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವಲಯದಲ್ಲಿ ಈ ಘಟನೆ ಸಂಭವಿಸಿದ್ದು, ಮಾದ (೨೩ ವರ್ಷ) ಮೃತ ಯುವಕ ಎಂದು ಗುರುತಿಸಲಾಗಿದೆ. ಹಿರಿಯಾಲ ಗ್ರಾಮದಿಂದ ಹಿಂದಿರುಗುವಾಗ ದಿಢೀರನೇ ಆನೆ ದಾಳಿ ನಡೆಸಿದ್ದು, ಈ ವೇಳೆ ಯುವಕ ಸಾವನ್ನಪ್ಪಿದ್ದಾನೆ.
ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುತ್ತಲು ನೆರೆದಿದ್ದ ಗ್ರಾಮಸ್ಥರು ಪರಿಹಾರಕ್ಕಾಗಿ ಒತ್ತಾಯಿಸಿದರು.