ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ.
ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು (38) ಮೃತಪಟ್ಟವರು.
ನಾಲ್ ರೋಡ್ ಗ್ರಾಮದಿಂದ ವಡಕೆಹಳ್ಳ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಸಿಗುವ ಚೆಕ್ ಡ್ಯಾಮ್‌ನಲ್ಲಿ ಮೃತ ಮದಲೈ ಮುತ್ತು ಪ್ರತಿದಿನ ಮೀನು ಹಿಡಿಯಲು ತೆರಳುತ್ತಿದ್ದರು ಎನ್ನಲಾಗಿದೆ. ಭಾನುವಾರ ಸಹ ಮೀನು ಹಿಡಿಯಲು ಬಲೆ ಹಾಕುವ ವೇಳೆ ಮೂರ್ಛೆ ತಪ್ಪಿ ನೀರಿನಲ್ಲಿ ಮುಳುಗಿದ್ದಾರೆ.
ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ರಾಮಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…