ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಇಂದು (ಏ.೫) ನಡೆದಿದೆ.
ಪುದೂರು ಗ್ರಾಮದ 33 ವರ್ಷದ ಮೀನಾ ಎಂಬುವವರು ಗೋಪಿನಾಥಂ ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿ ಕಾಲುಜಾರಿ ಮುಳುಗಿದ್ದಾರೆ. ಇವರನ್ನು ರಕ್ಷಿಸಲು ಹೋದ ಮಕ್ಕಳಾದ ಪವಿತ್ರಾ(13) ಮತ್ತು ಕೀರ್ತಿ(12) ತಾವು ಮುಳುಗಿ ಸಾವನ್ನಪ್ಪಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.





