ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಮನೆಗೆ ಮಂಗಳವಾರ ಮುಂಜಾನೆ ಕಡವೆಯೊಂದು ನುಗ್ಗಿದೆ. ಇದರಿಂದ ಗಾಬರಿಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಕಡವೆ ಮರಿಯನ್ನು ಹಿಡಿದು ಜೀಪಿನಲ್ಲಿ ಕೊಂಡೊಯ್ದು ಅರಣ್ಯಕ್ಕೆ ಬಿಟ್ಟಿದ್ದಾರೆ.
ಸದ್ಯ ಕಡವೆ ಕುಣಿದಾಡಿ ಮನೆಯ ಟಿವಿ, ಸೋಕೇಸ್‌ಗೆ ಹಾನಿಮಾಡದೆ ಇರುವುದರಿಂದ ಹಾನಿ ತಪ್ಪಿದಂತಿದೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ಕುಂದಕೆರೆ ಅರಣ್ಯ ವಲಯ ಸಿಬ್ಬಂದಿಗಳಾದ ಮಂಜುನಾಥ್, ಕಿರಣ್‌ರವರು ಕಡವೆಯನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.





