ಚಾಮರಾಜನಗರ

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಮನೆಗೆ ಮಂಗಳವಾರ ಮುಂಜಾನೆ ಕಡವೆಯೊಂದು ನುಗ್ಗಿದೆ. ಇದರಿಂದ ಗಾಬರಿಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಕಡವೆ ಮರಿಯನ್ನು ಹಿಡಿದು ಜೀಪಿನಲ್ಲಿ ಕೊಂಡೊಯ್ದು ಅರಣ್ಯಕ್ಕೆ ಬಿಟ್ಟಿದ್ದಾರೆ.

ಸದ್ಯ ಕಡವೆ ಕುಣಿದಾಡಿ ಮನೆಯ ಟಿವಿ, ಸೋಕೇಸ್‌ಗೆ ಹಾನಿಮಾಡದೆ ಇರುವುದರಿಂದ ಹಾನಿ ತಪ್ಪಿದಂತಿದೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ಕುಂದಕೆರೆ ಅರಣ್ಯ ವಲಯ ಸಿಬ್ಬಂದಿಗಳಾದ ಮಂಜುನಾಥ್, ಕಿರಣ್‌ರವರು ಕಡವೆಯನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

10 mins ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

35 mins ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

49 mins ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

1 hour ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

1 hour ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

2 hours ago