ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಸಂಪ್ರದಾಯದಂತೆ ಜರುಗಿದವು.
ಅಮಾವಾಸ್ಯೆ ಪ್ರಯುಕ್ತ ಇಂದು ಮುಂಜಾನೆಯಿಂದಲೇ ಮಲೆ ಮಹದೇಶ್ವರ ಸ್ವಾಮಿ ಮೂರ್ತಿಗೆ ಎಳನೀರಿನ ಅಭಿಷೇಕ, ಹಾಲು, ಪಂಚಾಮೃತ ಅಭಿಷೇಕ ಪೂಜೆ ನೆರವೇರಿದವು. ನೈವೇದ್ಯ ಅರ್ಪಿಸಿದ ಬಳಿಕ ಮಹಾ ಮಂಗಳಾರತಿ ಮಾಡಲಾಯಿತು.
ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದರು. ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸವ ವಾಹನ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಸೇವೆಗಳನ್ನು ಮಾಡುವ ಮೂಲಕ ತಮ್ಮ ಹರಕೆಯನ್ನು ಸಲ್ಲಿಸಿದರು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅತಿಥಿ ಗಣ್ಯರಿಗೆ ಗೇಟ್ ನಂಬರ್ 4, 5ರಲ್ಲಿ ನೇರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಶ್ರೀ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಜನರಿಗೆ ಶ್ರೀ ಮಲೆ ಮಹದೇಶ್ವರ ಸಾಮಿ ಕ್ಷೇತ್ರ ಅಭಿವೃದ್ಧಿ ಪಾಧಿಕಾರದ ವತಿಯಿಂದ ಕುಡಿಯುವ ನೀರು, ದಾಸೋಹ, ನೆರಳಿನ ವ್ಯವಸ್ಥೆ, ವಿಶೇಷ ದಾಸೋಹ, ಅಮಾವಾಸ್ಯೆ ಪ್ರಯುಕ್ತ ಗರ್ಭಗುಡಿಯಲ್ಲಿ ಶ್ರೀ ಸ್ವಾಮಿಗೆ ವಿವಿಧ ಫಲಪಷ್ಪಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು.
ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಬೆಟ್ಟಕ್ಕೆ ಬರುವ ಭಕ್ತಾದಿಗಳು ಹಾಗೂ ಉರುಳು ಸೇವೆ ಮಾಡುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದೇಗುಲದ ಹೊರ ಆವರಣದಲ್ಲಿ ಆಗಾಗ್ಗೆ ಟ್ಯಾಂಕರ್ ಮೂಲಕ ನೀರು ಸಿಂಪಡಣೆ ಮಾಡಲಾಗುತ್ತಿತ್ತು.
ಬೇಸಿಗೆ ರಜೆ ಮುಗಿದು ಶಾಲೆಗಳ ಪ್ರಾರಂಭವಾಗಲು ಕೆಲವೇ ಕೆಲವು ದಿನಗಳು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರಿಂದ ವಾಹನ ದಟ್ಟಣೆ ಉಂಟಾಯಿತು.
ರಂಗಮಂದಿರದಲ್ಲಿ ವಾಸ್ತವ್ಯ : ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಶುಕ್ರವಾರ ಎಣ್ಣೆ ಮಜ್ಜನ ಸೇವೆ ಮುಗಿಸಿ ರಂಗಮಂದಿರದಲ್ಲಿ ವಾಸ್ತವ್ಯ ಹೂಡಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳಾದ ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ತುಮಕೂರು, ರಾಮನಗರ, ನಂಜನಗೂಡು, ಕನಕಪುರ ತಾಲೂಕುಗಳಿಂದ ಹೆಚ್ಚಿನ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ವಿವಿಧ ಸೇವೆಗಳಲ್ಲಿ ಪಾಲ್ಗೊಂಡಿದ್ದರು.
ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ತಿರುಪತಿ ಮಾದರಿಯ ಕ್ಯೂ ಲೈನ್ ಉದ್ಘಾಟನೆಯಾದ ನಂತರ ಭಕ್ತಾದಿಗಳಿಗೆ ಇನ್ನು ಹೆಚ್ಚಿನ ಅನುಕೂಲ ಸಿಗಲಿದೆ ಎಂದು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ.ಈ.ರಘು ತಿಳಿಸಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…