ಗುಂಡ್ಲುಪೇಟೆ: ತಾಲ್ಲೂಕಿನ ಶ್ಯಾನಡ್ರಹಳ್ಳಿ-ಮೂಡಗೂರು ಗ್ರಾಮದ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಮೂಡಗೂರು ಗ್ರಾಮದ ನಾಗರಾಜಪ್ಪ ಎಂಬವರ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದರು.
ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ಕಾಡಾನೆ ಎಲ್ಲಿಂದ ಬಂತು ಎಂಬುದು ತಿಳಿದುಬಂದಿಲ್ಲ. ಕೂಡಲೇ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆ ಹಿಡಿದು ರೈತರ ಫಸಲುಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಶ್ಯಾನಡ್ರಹಳ್ಳಿ ಗ್ರಾಮದ ಮುಖಂಡ ಮೃತ್ಯುಂಜಯರವರು ಒತ್ತಾಯಿಸಿದ್ದಾರೆ.
ಗುಂಡ್ಲುಪೇಟೆ ಬಫರ್ ಜೋನ್ ಎಸಿಎಫ್ ಸುರೇಶ್ ಕುಮಾರ್ ಮಾತನಾಡಿ, ಕಾಡಾನೆಯೊಂದು ಬಂದು ಕಬ್ಬಿನ ಗದ್ದೆಯೊಳಗೆ ಸೇರಿಕೊಂಡಿದ್ದು, ಮಧ್ಯಾಹ್ನದ ಸಮಯವಾದ ಕಾರಣ ರೈತರು, ಸಾರ್ವಜನಿಕರು ಜಮೀನಿನಲ್ಲಿ ಕೆಲಸ ಕಾರ್ಯ ಮಾಡುತ್ತಿರುತ್ತಾರೆ. ಕಾರ್ಯಾಚರಣೆ ಮಾಡಿದರೆ ಅಪಾಯ ಎದುರಾಗಬಹುದು. ಹಾಗಾಗಿ ಜಿಲ್ಲಾ ಕೇಂದ್ರದಿಂದ ಸಿಬ್ಬಂದಿ ಕರೆಸಿ ಕಾಡಾನೆ ಓಡಿಸಲು ತಂಡ ರಚಿಸಲಾಗಿದೆ. ಸಂಜೆಯ ನಂತರ ಅದನ್ನು ಹಿಮ್ಮೆಟ್ಟಿಸಲಾಗುವುದು ಎಂದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…