ಹನೂರು: ನಿನ್ನೆ ( ಏಪ್ರಿಲ್ 09 ) ಸಂಜೆ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲಿನ ಹೊನ್ನೇನಹಳ್ಳಿಯ ಲಕ್ಷ್ಮಿ ( 40 ) ಎಂಬ ಮಹಿಳೆ ಕಾಡಾನೆ ದಾಳಿಗೆ ಸಾವನ್ನಪ್ಪಿದ ದುರ್ದೈವಿ. ಹೊನ್ನೇನಹಳ್ಳಿ ಗ್ರಾಮದಿಂದ ಒಟ್ಟು 8 ಮಂದಿ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ್ದು, ಈ ಪೈಕಿ ಮೃತ ಲಕ್ಷ್ಮಿ, ಪದ್ಮಮ್ಮ ಮತ್ತು ಪುಟ್ಟರಾಜು ಅವರು ಕಾಲ್ನಡಿಗೆ ಮೂಲಕ ಹೊರಟಿದ್ದರು.
ಸಂಜೆ 7 ಗಂಟೆ ಸಮಯಕ್ಕೆ ಆನೆ ತಲೆದಿಂಬ ಎಂಬ ಸ್ಥಳದ ಸಮೀಪ ಕಾಡಾನೆ ಹಠಾತ್ ದಾಳಿ ನಡೆಸಿದೆ. ಪರಿಣಾಮ ಲಕ್ಷ್ಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್…
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…