ಚಾಮರಾಜನಗರ

ಬೈಕ್ಗಳ ನಡುವೆ ಅಪಘಾತ : ಅಗ್ನೀವಿರ ಯೋಧ ‌ಸಾವು

ಚಾಮರಾಜನಗರ : ತಾಲೂಕಿನ ಕಮರವಾಡಿ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಎರಡು ಬೈಕ್​ಗಳ ನಡುವೆ ಅಪಘಾತದಲ್ಲಿ ಅಗ್ನಿ ವೀರ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಮರಾಜನಗರದ ಪ್ರಜ್ವಲ್ (21) ಸಾವನ್ನಪ್ಪಿದ ಅಗ್ನಿವೀರ. ಚಾಮರಾಜನಗರದ ಸೇವಾ ಭಾರತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಚಂದ್ರ ಅವರ ಪುತ್ರನಾಗಿರುವ ಇವರು ಪಶ್ಚಿಮ ಬಂಗಾಳದಲ್ಲಿ ಅಗ್ನಿವೀರ ಆಗಿ ಕೆಲಸ ಮಾಡುತ್ತಿದ್ದರು. ರಜೆ ಮೇಲೆ ಬಂದಿದ್ದ ಪ್ರಜ್ವಲ್, ಮೈಸೂರಿಗೆ ತೆರಳಿ ಟೀ.ನರಸೀಪುರ ಮಾರ್ಗವಾಗಿ ವಾಪಸ್ ಮರಳುವಾಗ ಕಮರವಾಡಿ ಬಳಿ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎದುರಿನ ಬೈಕ್​ನಲ್ಲಿದ್ದ ಸುಭಾಷ್, ಮಹಾದೇವಸ್ವಾಮಿ ಹಾಗೂ ಪ್ರಜ್ವಲ್ ಬೈಕ್​ನಲ್ಲಿದ್ದ ರೋಹಿತ್ ಎಂಬವರಿಗೆ ಗಾಯಗಳಾಗಿದೆ. ಅವರನ್ನು ಸಂತೇಮರಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ಸ್​ಗೆ ರವಾನೆ ಮಾಡಿ, ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

5 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

6 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

6 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

7 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

7 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

7 hours ago