ಕೊಳ್ಳೇಗಾಲ : ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಪಾದಚಾರಿ ಅಡ್ಡಬಂದಾಗ ಆಯಾತಪ್ಪಿ ಬಿದ್ದ ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್ ಸವಾರ ಹಾಗೂ ಪದಚಾರಿ ಗಂಭೀರವಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಮ.ಬೆಟ್ಟದಿಂದ ಪೂಜೆ ಮುಗಿಸಿ ವಾಪಸ್ಸು ಬರುವಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ: ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ
ಮೃತ್ತ ವ್ಯಕ್ತಿ ಮಳ್ಳವಳ್ಳಿ ತಾಲ್ಲೂಕು ರಾವಂದೂರು ಗ್ರಾಮದ ಮನೋಹರ್(18) ಎನ್ನಲಾಗಿದೆ. ಗಾಯಗೊಂಡ ಬೈಕ್ ಸವಾರ ಯಳಂದೂರು ತಾಲ್ಲೂಕಿನ ಮದ್ದೂರು ಗ್ರಾಮದ ರವಿಕುಮಾರ್ ಹಾಗೂ ಪಾದಚಾರಿ ಕಾಮಗೆರೆ ಗ್ರಾಮದ ಸುರೇಶ್ ಎಂದು ಗುರುತಿಸಲಾಗಿದೆ.
ಮೃತ್ತ ವ್ಯಕ್ತಿ ಹಾಗೂ ಬೈಕ್ ಸವಾರರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ರಜಾದಿನವಾದ್ದರಿಂದ ಮ.ಬೆಟ್ಟಕ್ಕೆ ಬಂದು ದರ್ಶನ ಮುಗಿಸಿ ವಾಪಸ್ಸು ಹೋಗುವಾಗ ಈ ದುರಂತ ಜರುಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…