ಚಾಮರಾಜನಗರ

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ 

ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ.

ಹನೂರು ತಾಲ್ಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ 17 ವರ್ಷದ ಅಪ್ಪು ಎಂಬಾತನೇ ಮೃತಪಟ್ಟ ಯುವಕನಾಗಿದ್ದಾನೆ.

ಘಟನೆಯ ವಿವರ: ಮಂಗಳವಾರ ಬೆಳಿಗ್ಗೆ ಟಿಬೆಟ್ ಕ್ಯಾಂಪ್‌ನಿಂದ ಬಸವನಗುಡಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡಿದ್ದ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಖಾಸಗಿ ವಾಹನದ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago