ಹನೂರು : ಟ್ರಾಕ್ಟರ್ – ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.
ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಮಲ್ಲೇಶ್ವರಂ ಸಮೀಪದ ತಿಲಕ್ ನಗರದ ಇಬ್ಬರು ಬೈಕ್ ಸವಾರರು, ಮಲ್ಲಯ್ಯನಪುರದ ಬಳಿ ಸಾಗುತ್ತಿದ್ದ ವೇಳೆ ಹನೂರಿನಿಂದ ವಡರದೊಡ್ಡಿಯ ಕಡೆಗೆ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ಹಿಂದಿನಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.
ಈ ನಡುವೆ ಇಬ್ಬರು ಬೈಕ್ ಸವಾರರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಟ್ರಾಕ್ಟರ್ ಸಂಪೂರ್ಣವಾಗಿ ಮುಗುಚಿ ಅಪಾರ ಪ್ರಮಾಣದ ಮೇವು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ಅಪಘಾತದ ಪರಿಣಾಮವಾಗಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ರಾಮಾಪುರ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…