ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ತಾಲ್ಲೂಕಿನ ಶೆಟ್ಟಳ್ಳಿ ಸಮೀಪದ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಶಾಂತ ಎಂಬ ರೈತನಿಗೆ ಸೇರಿದ ಜೋಳದ ಮೆದೆ ಏಕಾಏಕಿ ಧಗೆದಗೆನೆ ಹೊತ್ತಿ ಉರಿಯತೊಡಗಿತು. ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿ ಮೆದೆ ಸಂಪೂರ್ಣ ಸುಟ್ಟು ಕರಕಲಾಯಿತು.
ಘಟನೆಯನ್ನು ಗಮನಿಸಿದ ಗ್ರಾಮಸ್ಥರು ತಕ್ಷಣವೇ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ನೀರು ಹಾಗೂ ಲಭ್ಯವಿದ್ದ ಇತರೆ ಸಾಧನಗಳ ಸಹಾಯದಿಂದ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಆದರೂ, ಆಗಲೇ ಹೆಚ್ಚಿನ ಭಾಗ ಸುಟ್ಟು ನಷ್ಟ ಉಂಟಾಯಿತು. ಬೆಂಕಿ ಕಾಣಿಸಿಕೊಂಡ ಕಾರಣ ತಿಳಿದುಬಂದಿಲ್ಲ. ಘಟನೆಯಿಂದ ಶಾಂತ ಅವರಿಗೆ ಆರ್ಥಿಕ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ನಷ್ಟದಲ್ಲಿ ರೈತ: ಬೇಸಿಗೆ ಕಾಲ ಆರಂಭಕ್ಕೂ ಮುನ್ನ ಹಸುಗಳಿಗೆ ಸಂಗ್ರಹಣೆ ಮಾಡಿದ್ದ ಮೇವಿನ ಮೆದೆ ಸಂಪೂರ್ಣ ಸುಟ್ಟು ಹೋಗಿದ್ದು, ಇದರಿಂದ ರೈತ ಶಾಂತ ಅವರಿಗೆ ಲಕ್ಷಾಂತರ ರೂ ನಷ್ಟವಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮವಹಿಸಿ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಇಸ್ರೇಲ್: ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…