ಚಾಮರಾಜನಗರ : ತಾಲೂಕಿನ ಹೆಬ್ಬಸೂರು ಗ್ರಾಮದಲ್ಲಿ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಗೊಬ್ಬರ ಹಾಗೂ ಕ್ರಿಮಿನಾಶಕಗಳನ್ನು ನೀಡುತ್ತಿದ್ದ ಗೊಬ್ಬರದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಅಂಗಡಿ ಒಳಗೆ ಇದ್ದ ಗೊಬ್ಬರಗಳು ಹಾಗೂ ಕ್ರಿಮಿನಾಶಕಗಳು ಎಲ್ಲವೂ ನಾಶವಾಗಿವೆ.
ಸುಮಾರು 10 ರಿಂದ 15 ಲಕ್ಷ ಬೆಲೆಬಾಳುವ ಗೊಬ್ಬರ ಹಾಗೂ ಕ್ರಿಮಿನಾಶಕಗಳು ನಾಶವಾಗಿವೆ. ಶಾರ್ಟ್ ಸರ್ಕ್ಯೂಟ್ ಆಗಿ ಈ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.





