ಚಾಮರಾಜನಗರ

ಹುಲಿಗೆ ವಿಷಪ್ರಾಷನ ಮಾಡಿದ್ದ ಆರೋಪಿ ಸೆರೆ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಆಗಸ್ಟ್.2ರಂದು ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷಪ್ರಾಷನದಿಂದ ಹುಲಿಯೊಂದನ್ನು ಸಾಯಿಸಿ ಅದನ್ನು 3 ತುಂಡುಗಳಾಗಿ ಬೇರ್ಪಡಿಸಲಾಗಿತ್ತು. ಈ ಸಂಬಂಧ ಅರಣ್ಯಾಧಿಕಾರಿಗಳು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪಚ್ಚಮಲ್ಲು, ಸಿದ್ದು, ಸಂಪು, ಗಣೇಶ್, ಚಂದು ಹಾಗೂ ಅಭಿಷೇಕ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇತ್ತೀಚೆಗಷ್ಟೇ ನಾಲ್ವರು ಆರೋಪಿಗಳಿಗೆ ಕೊಳ್ಳೇಗಾಲ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ನಾಪತ್ತೆಯಾಗಿದ್ದ ಆರೋಪಿ ಮರಿ ವೀರಪ್ಪನ್ ಎಂದೇ ಕುಖ್ಯಾತನಾಗಿದ್ದ ಗಂಗನದೊಡ್ಡಿ ಗ್ರಾಮದ ಗೋವಿಂದ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿತ್ತು. ಆದರೆ ಆತ 5 ತಿಂಗಳಿಂದ ತಲೆಮರೆಸಿಕೊಂಡಿದ್ದನು.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸೆರೆ: ಬುಧವಾರಮೈಸೂರು ನ್ಯಾಯಾಲಯಕ್ಕೆ ಕೇಸ್‌ವೊಂದರ ನಿಮಿತ್ತ ಆಗಮಿಸಿದ್ದ ಗೋವಿಂದನ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರು. ಆದರೆ ಈ ಬಗ್ಗೆ ತಿಳಿದ ಗೋವಿಂದ ತಪ್ಪಿಸಿಕೊಂಡು ರೈಲ್ವೆ ನಿಲ್ದಾಣಕ್ಕೆ ಹೊರಟಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಲವು ಪ್ರಕರಣಗಳಲ್ಲಿ ಭಾಗಿ: ಹುಲಿಯನ್ನು ಮೂರು ಪೀಸ್ ಮಾಡಿದ್ದ ಕೊಂದಿದ್ದ ಪ್ರಮುಖ ಆರೋಪಿ ಗೋವಿಂದನ ವಿರುದ್ಧ ರಾಮಾಪುರ ಠಾಣೆ ಹಾಗೂ ರಾಮಾಪುರ ವನ್ಯಜೀವಿ ವಲಯ ಮತ್ತು ಹನೂರು ಬಫರ್ ವಲಯ, ಹನೂರು ಠಾಣೆ, ಅರಣ್ಯ ಸಂಚಾರಿ ದಳದಲ್ಲಿ ಪ್ರಕರಣಗಳು ದಾಖಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸಿಎಫ್ ವಿರಾಜ್ ಹೊಸೂರ್, ಆರ್‌ಎಫ್‌ಒಗಳಾದ ನಾಗರಾಜು, ಜೀತೇಂದ್ರ, ಮೈಸೂರು ಅಪರಾದ ಪತ್ತೆದಳದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…

24 mins ago

ಓದುಗರ ಪತ್ರ: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ನಿರಂತರ ಶಾಪ

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…

26 mins ago

ಓದುಗರ ಪತ್ರ: ಶಾಲೆಗಳಲ್ಲಿ ಕನ್ನಡ ದಿನ ದಿನಪತ್ರಿಕೆಗಳ ಓದು ಕಡ್ಡಾಯವಾಗಲಿ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…

28 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು – ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

31 mins ago

ಸ್ಮಾರಕವಾಗದೇ ಪಾಳು ಬಿದ್ದಿದೆ ಕೆ.ಎಸ್.ನರಸಿಂಹಸ್ವಾಮಿ ಮನೆ

ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…

42 mins ago

ಅಭಿವೃದ್ಧಿ ಹರಿಕಾರ ದುಗ್ಗಹಟ್ಟಿ ವೀರಭದ್ರ

ಜಿ.ಎಲ್.ತ್ರಿಪುರಾಂತಕ  ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು…

47 mins ago