ಚಾಮರಾಜನಗರ

ಅದ್ದೂರಿಯಾಗಿ ನಡೆದ ಮಲೆಮಹದೇಶ್ವರ ಬೆಟ್ಟದ ಜಾತ್ರೆ

 ಚಾಮರಾಜನಗರ : ಪ್ರಸಿದ್ಧ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ರಥೋತ್ಸವ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿಅದ್ಧೂರಿಯಾಗಿ ನೆರವೇರಿತು.
ದೀಪಾವಳಿ ಹಬ್ಬದ ಬಲಿಪಾಡ್ಯಮಿ ಹಾಗೂ ಅಮಾವಾಸ್ಯೆ ಅಂಗವಾಗಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬೆಳಗ್ಗೆ 9.15ಕ್ಕೆ ರಥಕ್ಕೆ ಚಾಲನೆ ಕೊಟ್ಟರು.

ಉಘೇ ಮಾದಪ್ಪ, ಮಾಯಕಾರ ಮಾದಪ್ಪ ಎಂಬ ಲಕ್ಷಾಂತರ ಧ್ವನಿಗಳ ಮೂಲಕ ಎಲ್ಲರ ಮೈ ರೋಮಾಂಚನಗೊಳಿಸಿತು. ಅಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉತ್ಸಾಹದಿಂದ ರಥ ಎಳೆದು ಇಷ್ಟರ್ಥಕ್ಕಾಗಿ ಪ್ರಾರ್ಥಿಸಿದರು.

ರಾಜ್ಯದ ಮೂಲೆ – ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸಿದ್ದು, ಕಳೆದ 4 ದಿನಗಳಿಂದ ಲಕ್ಷ- ಲಕ್ಷ ಮಂದಿ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮಿ ದರ್ಶನ ಪಡೆದಿದ್ದಾರೆ.
ಮಹದೇಶ್ವರನ ಪ್ರಸಾದವಾದ ಲಾಡು ಕಳೆದ 2 ದಿನದಿಂದ ಎರಡೂವರೆ ಲಕ್ಷಕ್ಕೂ ಹೆಚ್ಚು ಲಾಡು ಮಾರಾಟವಾಗಿದೆ.

 

andolana

Recent Posts

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

2 mins ago

ಕೊಡಗಿನಲ್ಲಿ ಅಂದಾಜು ೨,೨೭೯ ಹೆಕ್ಟೇರ್ ಬೆಳೆ ಹಾನಿ

ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ…

9 mins ago

ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟ ಶುರು

ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ…

14 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ; ಲೋಕಾಯುಕ್ತರಿಂದ ತನಿಖೆ?

ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ…

19 mins ago

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

17 hours ago