ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಪದಾಧಿಕಾರಿಗಳು ಮತ್ತು ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಅಸ್ಪತ್ರೆಯ ಮುಂಭಾಗದಲ್ಲಿ ಧರಣಿ ಕುಳಿತ ಪ್ರತಿಭಟನಕಾರರು ಸಿಮ್ಸ್, ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ಸಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರರು ನೇಮಕ ಮಾಡಿಕೊಳ್ಳುವಾಗ ಬಹಳ ಶೋಷಣೆ ನಡೆಯುತ್ತಿದೆ. ನೌಕರರಿಗೆ ಸರಿಯಾಗಿ ಸಂಬಳ ನೀಡುವುದಿಲ್ಲ. ಹೆಚ್ಚು ದುಡಿಸಿಕೊಳ್ಳುವುದು ಸೇರಿದಂತೆ ಕಾರ್ಮಿಕ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗುತ್ತಿದೆ.
ಈ ಬಗ್ಗೆ ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ತಪ್ಪಿಸಲು ಮುಂದಾಗ ನೌಕರನ್ನೇ ವಜಾಗೊಳಿಸಲಾಗಿದೆ. ಈ ನೌಕರನ್ನು ವಾಪಸ್ ಕೆಲಸಕ್ಕೆ ತೆಗೆದುಕೊಳ್ಳುವಂತೆ ಒತ್ತಾಯ ಮಾಡುತ್ತಾ ಬಂದಿದ್ದರೂ ಸಹ ಸಿಮ್ಸ್ ಹಾಗೂ ಟೆಂಡರ್ ದಾರರು ಸೊಪ್ಪು ಹಾಕುತ್ತಿಲ್ಲ’ ಎಂದು ದೂರಿದರು.
ಉಪ ಕಾರ್ಮಿಕರ ಆಯುಕ್ತರ ಆದೇಶದಂತೆ ಐದು ಜನ ಕಾರ್ಮಿಕರ ಮೂರು ತಿಂಗಳ ವೇತನವನ್ನು ತಕ್ಷಣವೇ ಪಾವತಿ ಮಾಡಬೇಕು. ಮತ್ತು ಆದೇಶದಂತೆ ಶುಶ್ರೂಷಕರ ವೇತನವನ್ನು ಪಾವತಿ ಮಾಡಬೇಕು.
ಕೋವಿಡ್ ವಾರಿಯರ್ಸ್ ಆಗಿ ಕೆಲಸ ಮಾಡಿದ ಶುಶ್ರೂಷಕರಾದ ಪೂರ್ಣಿಮಾ ಮತ್ತು ರಂಜಿತಾ ಅವರಿಗೆ ಹೆರಿಗೆ ರಜಾ ಕಾರಣಕ್ಕೆ ಕೆಲಸ ನಿರಾಕರಿಸಿದ್ದು, ತಕ್ಷಣವೇ ಕಾರ್ಮಿಕರ ಅಧಿಕಾರಿಗಳ ಮುಂದೆ ಒಪ್ಪಿಗೊಂಡಂತೆ ಕೆಲಸ ನೀಡಬೇಕು’ ಎಂದು ಆಗ್ರಹಿಸಿದರು
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ…
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಗುಂಡೇಟಿನಿಂದ ಕಾಂಗ್ರೆಸ್ ಕಾರ್ಯಕರ್ತ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ…