Mysore
28
light rain

Social Media

ಶನಿವಾರ, 21 ಫೆಬ್ರವರಿ 2026
Light
Dark

ಅಜ್ಜೀಪುರದಿಂದ ಶಕ್ತಿಸೌಧಕ್ಕೆ ಪಾದಯಾತ್ರೆ : ರೈತ ಸಂಘಟನೆಗಳ ಬೆಂಬಲಕ್ಕೆ ಮನವಿ

ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ ಡಿ.ಪಿ.ಆರ್ ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಜಿಲ್ಲಾವಾರು ರೈತ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಮನವಿ ಮಾಡಿದ್ದಾರೆ.

ಮಳವಳ್ಳಿ, ಕೆ ಎಂ ದೊಡ್ಡಿ, ಮದ್ದೂರು, ಚೆನ್ನಪಟ್ಟಣ,ರಾಮನಗರ, ಬಿಡದಿ, ತಾಲೂಕು ಘಟಕದ ರೈತರು ಹಾಗೂ ಪದಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ನಂತರ ಮಾತನಾಡಿದರು.

ಫೆಬ್ರವರಿ 25ರಂದು ಹನೂರು ತಾಲೂಕಿನ ಅಜ್ಜೀಪುರ ಗ್ರಾಮದಿಂದ ಬೆಂಗಳೂರಿನ ವಿಧಾನಸೌಧದ ವರೆಗೆ ಪಾದಯಾತ್ರೆ ಹೊರಡಲಿದೆ ಪ್ರಾರಂಭದಲ್ಲಿ ಒಂದು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ ನಂತರ 300ಕ್ಕೂ ಹೆಚ್ಚು ರೈತರು ನಿರಂತರವಾಗಿ ಪ್ರತಿಭಟನೆ ಮಾಡಲಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪದಾಧಿಕಾರಿಗಳು ಸಹಕಾರ ನೀಡಲಿದ್ದಾರೆ. ಈ ಪಾದಯಾತ್ರೆಯಲ್ಲಿ ಸಾರ್ವಜನಿಕರು ಸಹ ಪಾಲ್ಗೊಳ್ಳುವ ಮೂಲಕ ಪಾದಯಾತ್ರೆಯನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದರು.

ಜಿಲ್ಲಾ ಸಂಘಟನೆ ಮೂಲಕ ಸಹಕಾರ
ಪಾದಯಾತ್ರೆ ಬರುವ ಸಂದರ್ಭದಲ್ಲಿ ಆಯಾಯ ತಾಲೂಕು, ಜಿಲ್ಲಾ ಘಟಕಗಳ ಪದಾಧಿಕಾರಿಗಳು ರೈತ ಮುಖಂಡರುಗಳು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿ ಪಾದಯಾತ್ರೆ ಬರುವಂತಹ ರೈತ ಬಂಧುಗಳಿಗೆ ನೆರವಾಗುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ ಎಂದು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೆ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ಹನೂರು ತಾಲೂಕು ಗೌರವ ಅಧ್ಯಕ್ಷ ರಾಜಣ್ಣ, ಕೆ ಎಂ ದೊಡ್ಡಿ ಜಿಲ್ಲಾ ಖಚಾoಚಿ ರವಿಕುಮಾರ್,ಸೇರಿದಂತೆ ಇನ್ನಿತರರು ಇದ್ದರು.

Tags:
error: Content is protected !!