ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ ಡಿಡಿ ರಾಮಚಂದ್ರ ರಾಜೇ ಅರಸು ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಯಳಂದೂರು ತಾಲ್ಲೂಕಿನ ಗುಂಬಳ್ಳಿ ಪ್ರೌಢಶಾಲಾ ಶಿಕ್ಷಕ ವೀರಭದ್ರಸ್ವಾಮಿ ಎಂಬುವವರ ಮೇಲೆ ಈ ವಿಚಾರಕ್ಕೆ ಸಂಬಂಧಿಸಿದಂತೆ ವೀರಭದ್ರಸ್ವಾಮಿ ಅವರನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ.
ಪ್ರವಾಸದ ವೇಳೆ ಶಿಕ್ಷಕ ವೀರಭದ್ರಸ್ವಾಮಿ ಅವರು ಬಸ್ ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕದಂಬ ಸೇನಾ ಮುಖಂಡ ಅಂಬರೀಶ್ ಎಂಬುವವರು ಬಿಇಒಗೆ ದೂರು ನೀಡಿದ್ದರು. ಬಳಿಕ ಬಸ್ ಚಾಲನೆ ಮಾಡಿದ ಶಿಕ್ಷಕನ ವಿರುದ್ಧ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಯ ವೇಳೆ ಮೇಲ್ನೋಟಕ್ಕೆ ಶಿಕ್ಷಕ ಬಸ್ ಚಾಲನೆ ಮಾಡಿರುವುದು ನಿಯಮ ಬಾಹಿರವಾಗಿದೆ.
ಈ ಹಿನ್ನೆಲೆಯಲ್ಲಿ ಸೇವಾ ನಡತೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಶಿಕ್ಷಕ ವೀರಭದ್ರಸ್ವಾಮಿ ಅವರನ್ನು ಅಮಾನತುಗೊಳಿಸಿ ಎಂದು ಶಾಲಾ ಶಿಕ್ಷಣ ಇಲಾಖೆ ಡಿಡಿ ರಾಮಚಂದ್ರರಾಜೇ ಅರಸು ಆದೇಶ ಹೊರಡಿಸಿದ್ದಾರೆ.