ಚಾಮರಾಜನಗರ

ಸೇವಾ ನಡತೆ ಉಲ್ಲಂಘನೆ ಆರೋಪ: ಬಸ್‌ ಚಾಲನೆ ಮಾಡಿದ ಶಿಕ್ಷಕ ಅಮಾನತಿಗೆ ಆದೇಶ

ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್‌ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ ಡಿಡಿ ರಾಮಚಂದ್ರ ರಾಜೇ ಅರಸು ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಯಳಂದೂರು ತಾಲ್ಲೂಕಿನ ಗುಂಬಳ್ಳಿ ಪ್ರೌಢಶಾಲಾ ಶಿಕ್ಷಕ ವೀರಭದ್ರಸ್ವಾಮಿ ಎಂಬುವವರ ಮೇಲೆ ಈ ವಿಚಾರಕ್ಕೆ ಸಂಬಂಧಿಸಿದಂತೆ ವೀರಭದ್ರಸ್ವಾಮಿ ಅವರನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ.

ಪ್ರವಾಸದ ವೇಳೆ ಶಿಕ್ಷಕ ವೀರಭದ್ರಸ್ವಾಮಿ ಅವರು ಬಸ್‌ ಚಾಲನೆ ಮಾಡಿದ ವಿಡಿಯೋ ವೈರಲ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಕದಂಬ ಸೇನಾ ಮುಖಂಡ ಅಂಬರೀಶ್‌ ಎಂಬುವವರು ಬಿಇಒಗೆ ದೂರು ನೀಡಿದ್ದರು. ಬಳಿಕ ಬಸ್‌ ಚಾಲನೆ ಮಾಡಿದ ಶಿಕ್ಷಕನ ವಿರುದ್ಧ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಯ ವೇಳೆ ಮೇಲ್ನೋಟಕ್ಕೆ ಶಿಕ್ಷಕ ಬಸ್ ಚಾಲನೆ ಮಾಡಿರುವುದು ನಿಯಮ ಬಾಹಿರವಾಗಿದೆ.

ಈ ಹಿನ್ನೆಲೆಯಲ್ಲಿ ಸೇವಾ ನಡತೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಶಿಕ್ಷಕ ವೀರಭದ್ರಸ್ವಾಮಿ ಅವರನ್ನು ಅಮಾನತುಗೊಳಿಸಿ ಎಂದು ಶಾಲಾ ಶಿಕ್ಷಣ ಇಲಾಖೆ ಡಿಡಿ ರಾಮಚಂದ್ರರಾಜೇ ಅರಸು ಆದೇಶ ಹೊರಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

6 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

6 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

6 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

7 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

7 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

13 hours ago