ಚಾಮರಾಜನಗರ

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು ದೋಚಿರುವ ಘಟನೆ ನಡೆದಿದೆ.

ದೇಗುಲದ ಬಾಗಿಲನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎರಡು ಹುಂಡಿಗಳನ್ನು ದೇಗುಲದ ಹೊರ ಭಾಗಕ್ಕೆ ತಂದು, ಅದನ್ನು ಕಬ್ಬಿಣದ ರಾಡ್‌ಗಳ ಮೂಲಕ ಒಡೆದು, ಅದರಲ್ಲಿದ್ದ ಲಕ್ಷಾಂತರ ರೂ.ಗಳನ್ನು ದೋಚಿ ಅಲ್ಲೇ ಬೀಸಾಡಿದ್ದಾರೆ.

ಅಲ್ಲದೆ ದೇವಸ್ಥಾನದ ಉತ್ಸವಮೂರ್ತಿಯಲ್ಲಿದ್ದ ಚಿನ್ನದ ತಾಳಿ ಬೊಟ್ಟುಗಳನ್ನು ಸಹ ದೋಚಿದ್ದಾರೆ. ಇದರೊಂದಿಗೆ ಚಾಲಾಕಿ ಕಳ್ಳರು ಸಿಸಿ ಕ್ಯಾಮೆರಾ, ಡಿವಿಆರ್‌ನ್ನು ಕೂಡ ಕಳ್ಳತನ ಮಾಡಿದ್ದಾರೆ.

ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಐತಿಹಾಸಿಕ ದೇಗುಲ: ಈ ದೇಗುಲ ಐತಿಹಾಸಿಕ ದೇಗುಲವಾಗಿದ್ದು ನೂರಾರು ವರ್ಷಗಳ ಐತಿಹ್ಯವಿದೆ. ಪ್ರತಿ ವರ್ಷವೂ ಇಲ್ಲಿ ಒಂದು ತಿಂಗಳ ಕಾಲ ಗ್ರಾಮ ದೇವತೆಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ಬಾರಿಯೂ ಹಬ್ಬ ನಡೆದ ನಂತರ ಹುಂಡಿುಂ ಹಣವನ್ನು ತೆಗೆದಿರಲಿಲ್ಲ. ಚಾಮುಂಡೇಶ್ವರಿ ಕೊಂಡೋತ್ಸವೂ ಕೂಡ ನಡೆುುಂತ್ತದೆ. ಕೊಂಡದ ರಾತ್ರಿ ಇಲ್ಲಿನ ದೇವಿಗೆ ಚಿನ್ನಾಭರಣಗಳನ್ನು ತೊಡಿಸಿ ದೇಗುಲದ ಬಾಗಿಲನ್ನೇ ಹಾಕುವುದಿಲ್ಲ. ಈ ಸಂದರ್ಭದಲ್ಲೂ ಕೂಡ ಇಲ್ಲಿ ಯಾವುದೇ ಕಳ್ಳತನ ನಡೆುದಿರುವುದಿಲ್ಲ. ಈಗ ನಡೆದಿರುವ ಕಳ್ಳತನ ಹಲವು ಅನುಮಾನಗಳಿಗೆ ಆಸ್ಪದ ನೀಡಿದೆ. ತನಿಖೆಯ ಬಳಿಕ ಇದಕ್ಕೆಲ್ಲಾ ಉತ್ತರ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

9 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

10 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

10 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

10 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

10 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

14 hours ago