ಚಾಮರಾಜನಗರ

ಮ.ಬೆಟ್ಟ | ಹಾಡಿಗಳಿಗೆ ಆಂಬುಲೆನ್ಸ್‌ ಸೇವೆ ಪ್ರಾರಂಭ

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ (Malemahadeshwara Betta) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿಗಳ ಜನರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಗ್ರಾಮಗಳಿದ್ದು ಬೆಟ್ಟ ಗುಡ್ಡಗಳಿಂದ ಅರಣ್ಯದ ಮಧ್ಯಭಾಗದಲ್ಲಿ ಇರುವುದರಿಂದ ಸಮರ್ಪಕ ರಸ್ತೆ ಇಲ್ಲದೆ ಇರುವುದರಿಂದ ಸಾರಿಗೆ ವ್ಯವಸ್ಥೆ ಇಲ್ಲದೆ ಇಲ್ಲಿ ನಾನ್ ನಿವಾಸಿಗಳು ತೊಂದರೆ ಅನುಭವಿಸುತ್ತಿರುವುದರ ಬಗ್ಗೆ ಶಾಸಕ ಎಂಆರ್ ಮಂಜುನಾಥ್ ರವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಧಿಕಾರದ ವೆಂಕಟೇಶ್ ರವರ ಗಮನಕ್ಕೆ ತಂದು ಪ್ರಾಧಿಕಾರದ ಅನುಮೋದನೆಯೊಂದಿಗೆ 18.5 ಲಕ್ಷ ವೆಚ್ಚದಲ್ಲಿ ವಿಶೇಷ ವ್ಯವಸ್ಥೆಯುಳ್ಳ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದರು.

ಕಳೆದ ಒಂದು ವರ್ಷಗಳಿಂದ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ ಈ ಭಾಗದಲ್ಲಿ ಆರೋಗ್ಯ ಸಮಸ್ಯೆಯಾದರೆ ಧೋಲಿಯ ಮುಖಾಂತರ ರೋಗಿಯನ್ನು ಆಸ್ಪತ್ರೆಗೆ ಕರೆ ತರಬೇಕಾಗಿತ್ತು. ಈ ಹಿನ್ನೆಲೆ ಬಹಳ ವರ್ಷಗಳ ಕನಸನ್ನು ನನಸು ಮಾಡುವ ನೆಟ್ಟಿನಲ್ಲಿ ಮುಖ್ಯಮಂತ್ರಿಗಳು , ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಆಂಬುಲೆನ್ಸ್ ಸೇವೆ ಒದಗಿಸಿ ಕೊಟ್ಟಿದ್ದೇವೆ. ಜನರು ಮತ್ತು ಮಾದಪ್ಪನ ಸೇವೆ ಮಾಡುವುದು ನಮ್ಮ ಪುಣ್ಯದ ಕೆಲಸವಾಗಿದೆ. ಇದು ಉಚಿತ ಸೇವೆಯಾಗಿದ್ದು ಚಾಲಕ ಹಾಗೂ ವಾಹನದ ನಿರ್ವಹಣೆಯನ್ನು ಪ್ರಾಧಿಕಾರದ ವತಿಯಿಂದಲೇ ಮಾಡಲಾಗುವುದು.

ಇದನ್ನೂ ಓದಿ:- ಮಂಡ್ಯ | ಜಿಲ್ಲೆಗೆ ಆಗಮಿಸಿದ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆ

ಆಂಬುಲೆನ್ಸ್ ವಾಹನವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ರೋಗಿಗಳನ್ನು ಕರೆತರಲು ತಜ್ಞ ವೈದ್ಯಕೀಯ ಸಿಬ್ಬಂದಿಗಳ ಅವಶ್ಯಕತೆ ಇರುವುದರಿಂದ ಆರೋಗ್ಯ ಇಲಾಖೆಯು ಇದರ ಜವಾಬ್ದಾರಿ ವಹಿಸಿಕೊಳ್ಳಲಿದೆ ಎಂದು ತಿಳಿಸಿದರು.

ಇನ್ನು ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳು ಹಾಗೂ ನಿವಾಸಿಗಳಿಗೆ ಅನುಕೂಲ ತಪ್ಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದಲೇ ಜನವನ ವಾಹನದ ವ್ಯವಸ್ಥೆ ಕಲ್ಪಿಸಲಾಗಿದೆ. ಬಡವರ ಸೇವೆ ಮಾಡುವುದು ಸಹ ಮಾದಪ್ಪನ ಸೇವೆ ಮಾಡಿದಷ್ಟೇ ಸಂತಸವಾಗುತ್ತಿದೆ ಚಿಕ್ಕ ಅವಕಾಶದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದೇನೆ ಎಂದು ಮಾಧ್ಯಮದವರಿಗೆ ತಿಳಿಸಿದರು.

ಶಾಸಕರಿಂದ ಹಸ್ತಾಂತರ: ಶ್ರೀ ಕ್ಷೇತ್ರ ಮಲೆಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಖರೀದಿಸಿರುವ ವಿಶೇಷ ಆಂಬುಲೆನ್ಸ್ ವಾಹನವನ್ನು ಶಾಸಕ ಎಂಆರ್ ಮಂಜುನಾಥ್, ಜಿಲ್ಲಾಧಿಕಾರಿ ಸಿ ಟಿ ಶಿಲ್ಪನಾಗ್ ರವರ ಸಮ್ಮುಖದಲ್ಲಿ ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕಾಡಂಚಿನ ಗ್ರಾಮಗಳ ನಿವಾಸಿಗಳು ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ತಕ್ಷಣ ನೀವಿರುವ ಸ್ಥಳಕ್ಕೆ ಬಂದು ಚಿಕಿತ್ಸೆ ಕೊಡಿಸಲು ಕರೆದೊಯ್ಯುತ್ತಾರೆ. ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳ ನಿವಾಸಿಗಳು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ, ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

18 mins ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

1 hour ago

ಫೆ.23ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಲೋಕಾರ್ಪಣೆ : ಪ್ರಧಾನಿ ಮೋದಿ ಭಾಗಿ

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…

2 hours ago

ಸ್ವಜಾತಿ ಪಕ್ಷಪಾತ ಬೇಡ ; ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

4 hours ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

8 hours ago